ಬೆಂಗಳೂರು : ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ನಡೆಸುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿರೋಧಿಸಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ನಲ್ಲಿ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
ಇದರಿಂದಾಗಿ ಕರ್ನಾಟಕದಂತಹ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಆಕಾಂಕ್ಷಿಗಳನ್ನು ವಿಫಲಗೊಳಿಸಿದೆ ಎಂದು ಹೇಳಿದರು. ಸಿಆರ್ಪಿಎಫ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಕೂಡಲೇ ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ.
ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಸಹಾಯ ಮಾಡಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವ ನಿಯಮವನ್ನು ಸಡಿಲಗೊಳಿಸುವುದು ಮುಖ್ಯ ಎಂದು ಟ್ವಿಟ್ಟರ್ ಮೂಲಕ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.