ಆಗಸ್ಟ್ 19 ರಿಂದ 21 ರವರೆಗೆ ನೆರೆ ಸಂತ್ರಸ್ತರ ಸಂಕಷ್ಟ ಆಲಿಸಲು ಹೊರಟ ಸಿದ್ದರಾಮಯ್ಯ

ಶನಿವಾರ, 17 ಆಗಸ್ಟ್ 2019 (12:11 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲನೆಗೆ ದಿನಾಂಕ ಫಿಕ್ಸ್ ಆಗಿದೆ.
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೇ ತಮ್ಮ ಸ್ವಕ್ಷೇತ್ರ ಬಾದಾಮಿಯಲ್ಲಿಯೂ ನೆರೆ ಉಂಟಾಗಿತ್ತು. ಆದರೆ ಸಿದ್ದರಾಮಯ್ಯನವರು ತಮಗೆ ಕಣ್ಣಿನ ಶಸ್ತ್ರಚಿಕಿತ್ಸೆಯಾಗಿರುವ ಕಾರಣ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರಕ್ಕೂ ಭೇಟಿ ನೀಡದಿರುವುದು ತೀವ್ರ ಟೀಕೆಗೆ ಗುರಿಯಾಗಿದ್ದು, ಇದೀಗ ಸಿದ್ದರಾಮಯ್ಯನವರು ನೆರೆಪೀಡಿತ ಪ್ರದೇಶಗಳಿಗೆ ತೆರಳಲು ಮುಂದಾಗಿದ್ದು ಆಗಸ್ಟ್ 19 ರಿಂದ 21 ರವರೆಗೆ ಬಾದಾಮಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 21ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿದ್ದರಾಮಯ್ಯ ಪರಿಹಾರದ ಕುರಿತು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ