ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತನ ಆಸೆ ಈಡೇರಿಸಲು ಹೊರಟ ಸಿದ್ದರಾಮಯ್ಯ

ಗುರುವಾರ, 18 ಫೆಬ್ರವರಿ 2021 (11:37 IST)
ಮಂಡ್ಯ : ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತನ ಆಸೆ ಈಡೇರಿಸಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಂಡ್ಯ ಜಿಲ್ಲೆ ಕೋಡಿದೊಡ್ಡಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ  ಕೃಷ್ಣ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ಡೆತ್ ನೋಟ್ ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್ ಅವರು ತನ್ನ  ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಈ ವಿಚಾರ ತಿಳಿದ ಸಿದ್ದರಾಮಯ್ಯ ಮಂಡ್ಯಕ್ಕೆ ತೆರಳಿ ಕಾರ್ಯಕರ್ತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ‍್ಳಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ