ಕೊವಿಡ್ ನಿಂದ ಮೃತಪಟ್ಟವರಿಗೆ 5 ಲಕ್ಷ ಕೊಡಿ: ಸಿದ್ದರಾಮಯ್ಯ ಬೇಡಿಕೆ
ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದವರಿಗೆ ಕೊವಿಡ್ ನಿಂದ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಇದನ್ನು 5 ಲಕ್ಷಕ್ಕೆ ಏರಿಕೆ ಮಾಡಿ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.