ಕಾಂಗ್ರೆಸ್ ಯಾಕೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದೆ? ಸಿದ್ದರಾಮಯ್ಯ ಸ್ಪಷ್ಟನೆ

ಗುರುವಾರ, 25 ಅಕ್ಟೋಬರ್ 2018 (08:44 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಅಪವಿತ್ರ ಮೈತ್ರಿ ಎಂದು ಟೀಕಿಸುವ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿಯವರ ಆಶಯದಂತೆ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಮುಂಬರುವ ಲೋಕಸಭೆ ಚುನಾವಣೆಯನ್ನು ಎದುರಿಸಲಿದೆ. ಇದರಿಂದ ಮತ ವಿಭಜನೆಯಾಗುವುದು ತಪ್ಪಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ನಾವು ಬಿಜೆಪಿಯವರು ಕಾಶ್ಮೀರದಲ್ಲಿ ಪಿಡಿಪಿ ಜತೆ ಹೊಂದಾಣಿಕೆ ಮಾಡಿಕೊಂಡಂತೆ ಸೈದ್ಧಾಂತಿಕವಾಗಿ ವಿರೋಧವಿರುವ ಪಕ್ಷಗಳ ಜತೆ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಅವರು ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ 450. ರೂ. ಇದ್ದ ಗ್ಯಾಸ್ ಸಿಲಿಂಡರ್ ದರ ಈಗ 950 ರೂ.ಗೆ ತಲುಪಿದೆ. ಈ ಅಚ್ಚೇ ದಿನ್ ಎಂಬುದೇ ದೊಡ್ಡ ಹಗರಣ. ಇದರ ಹೆಸರಿನಲ್ಲಿ ಮೋದಿಯವರು ದೇಶದ ಬಡ ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ