ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೆ ವಿಷಯ ಮುಟ್ಟಿದ್ದು, ಇದೇ ವಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಸಿಗುವ ಸಾಧ್ಯತೆಯಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಭಾರೀ ಶ್ರಮವಹಿಸಿದ್ದರು. ಹೀಗಾಗಿ ಅವರ ಅಸಮಾಧಾನವನ್ನು ಕಡೆಗಣಿಸುವಂತಿಲ್ಲ. ಜತೆಗೆ ಈಗೀಗ ಬೇರೆ ಶಾಸಕರೂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸುತ್ತಿರುವುದರಿಂದ ಅವರನ್ನು ಒಮ್ಮೆ ದೆಹಲಿಗೆ ಕರೆಸಿ ಮಾತುಕತೆ ನಡೆಸುವಂತೆ ಶಾಸಕ ಕೆಜೆ ಜಾರ್ಜ್ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಶೀಘ್ರದಲ್ಲೇ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.