ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್!
ಗುರುವಾರ, 9 ಆಗಸ್ಟ್ 2018 (10:17 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಮೈತ್ರಿ ಬಗ್ಗೆ ಇರುವ ಗೊಂದಲಗಳಿಗೆ ಉತ್ತರ ನೀಡಿದ್ದಾರೆ. ಮೈತ್ರಿ ಧರ್ಮ ಪಾಲಿಸಿದರೆ ಮಾತ್ರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸಾಧ್ಯ. ಇದು ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಕ್ಕೂ ಅನ್ವಯಿಸುತ್ತದೆ ಎಂದು ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ಅಷ್ಟೇ ಅಲ್ಲದೆ, ಮೈತ್ರಿ ಮಾಡಿಕೊಳ್ಳಬೇಕೇ ಬೇಡವೇ ಎಂಬುದು ಸಮನ್ವಯ ಸಮಿತಿ ನಿರ್ಧರಿಸುತ್ತದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದು ಆಯಾ ಜಿಲ್ಲೆಗಳ ನಾಯಕರಿಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.