ಟಿಪ್ಪು ಜಯಂತಿ ತಪ್ಪಿಸಿಕೊಂಡ ಸಿಎಂ ಎಚ್ ಡಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿಂದ ಸಿಎಂ ಕಾರ್ಯಕ್ರಮಕ್ಕೆ ಗೈರು ಹಾಜರಾದರು ಎಂದು ಊಹಾಪೋಹಗಳಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಕುಮಾರಸ್ವಾಮಿಗೆ ಪರೋಕ್ಷ ಟಾಂಗ್ ಕೊಟ್ಟಂತಿದೆ.
‘ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಮ್ಮೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಾನೂ ಮಾಡಿರಬಹುದು. ಆದರೆ ಜಾತ್ಯಾತೀತೆಯಂತಹ ಮೂಲಭೂತದ ಸಿದ್ಧಾಂತದ ವಿಚಾರದಲ್ಲಿ ನಾನು ರಾಜಿ ಮಾಡಿಕೊಳ್ಳಲಾರೆ. ಅಧಿಕಾರ ಇರುತ್ತೆ, ಹೋಗುತ್ತೆ, ಐ ಡೋಂಟ್ ಕೇರ್’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದು ಕುಮಾರಸ್ವಾಮಿಯನ್ನು ಉದ್ದೇಶಿಸಿಯೇ ಮಾಡಿರುವ ಟ್ವೀಟ್ ಎಂದೇ ಬಣ್ಣಿಸಲಾಗುತ್ತಿದೆ.