ಬೆಂಗಳೂರು: ಕೊಡಗು ಪ್ರವಾಹ ವಿಚಾರದಲ್ಲಿ ನಡೆದುಕೊಂಡ ರೀತಿಗೆ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
‘ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಒದಗಿಸುವ ವಿಚಾರದಲ್ಲಿ ಪ್ರಧಾನಿ ಮೋದಿ ಮಲತಾಯಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳನ್ನು ಖುದ್ದಾಗಿ ಸಮೀಕ್ಷೆ ಮಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಅದರ ಬದಲು ರಕ್ಷಣಾ ಮಂತ್ರಿಗಳನ್ನು ಕಳುಹಿಸಿದ್ದಾರೆ. ಆದರೆ ಅವರಿಗೆ ಸಮಸ್ಯೆ ಆಲಿಸುವ ಬದಲು ರಾಜ್ಯದ ಸಚಿವರ ಮೇಲೆ ಸವಾರಿ ಮಾಡುವುದರಲ್ಲೇ ಹೆಚ್ಚು ಆಸಕ್ತಿಯಿದ್ದಂತಿತ್ತು’ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕಿಸಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಭೇಟಿ ವೇಳೆ ಅಧಿಕಾರಿಗಳು, ಸಚಿವರ ಮೇಲೆ ರೇಗಾಡಿದ ವಿಚಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಸ್ವತಃ ಡಿಸಿಎಂ ಪರಮೇಶ್ವರ್ ಕೂಡಾ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.