ಸಿದ್ದರಾಮಯ್ಯ ಸರಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ: ಬಿ.ಎಸ್.ಯಡಿಯೂರಪ್ಪ

ಗುರುವಾರ, 21 ಜುಲೈ 2016 (14:29 IST)
ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಿ.ಎಸ್‌.ಯಡಿಯೂರಪ್ಪ, ರಾಜ್ಯದಲ್ಲಿ ಇಬ್ಬರು ಡಿವೈಎಸ್‌ಪಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ. ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಗಣಪತಿ ಅವರ ಪತ್ನಿ ಪಾವನಾ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ