ದೆಹಲಿಗೆ ಪ್ರಯಾಣಿಸಿದ ಸಿದ್ದು, ಡಿಕೆಶಿ

ಸೋಮವಾರ, 19 ಜುಲೈ 2021 (20:32 IST)
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದರು.
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತ ಹೇಳಿಕೆ ಹಾಗೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲು ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂ
ತೆ ಸೂಚಿಸಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ದೆಹಲಿಗೆ ತೆರಳಬೇಕಿತ್ತು. ಆದರೆ ಡಿಕೆ ಶಿವಕುಮಾರ್ ತಡವಾಗಿ ಬಂದಿದ್ದರಿಂದ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಅವರನ್ನು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು ಜೊತೆಯಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.
ಡಿಕೆ ಶಿವಕುಮಾರ್ ಒಂಟಿಯಾಗಿ ಸೋಮವಾರ ಒಂದು ಗಂಟೆ ತಡವಾಗಿ ರಾತ್ರಿ 7.40ರ ವಿಮಾನದಲ್ಲಿ ಕೆಐಎಎಲ್ ನಿಂದ ದೆಹಲಿಗೆ ತೆರಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ