ಶುಕ್ರವಾರ ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಸಿದ್ದು ಅಧಿಕಾರ ಸ್ವೀಕಾರ
ಸಾಮಾಜಿಕ ಜಾಲತಾಣದಲ್ಲಿ ತಮ್ಮ ತೇಜೋವಧೆ ಮಾಡಿದ ಸಿದ್ದು ಸಾರ್ವಜನಿಕವಾಗಿ ಕ್ಷಮೆ ಕೋರದೇ ಅವರನ್ನು ಭೇಟಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅಮರಿಂದರ್ ಸಿಂಗ್ ಆಗ್ರಹಿಸಿದ್ದರು. ಆದರೆ ಸಿದ್ದು ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇತ್ತೀಚೆಗಷ್ಟೇ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಸಿದ್ದುಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡುವ ಭರವಸೆ ಲಭಿಸಿತ್ತು. ಇದೀಗ ಪಕ್ಷದ ವಕ್ತಾರರು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ದೊರೆತಿರುವುದನ್ನು ಖಚಿತಪಡಿಸಿದ್ದರು.