ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಿದೆ ಎಂದಿದ್ದಾರೆ.
ರೇಷ್ಮೆಗೂಡಿನ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮ ದಾಖಲೆ ದರಕ್ಕೆ ರೇಷ್ಮೆಗೂಡು ಮಾರಾಟ ಆಗುತ್ತಿದೆ ಎಂದಿದ್ದಾರೆ.