ಧರ್ಮಸ್ಥಳ: ಇಲ್ಲಿ ಹಲವು ವರ್ಷಗಳಿಂದ ನೂರಾರು ಶವ ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡ ಈಗ ತನಿಖೆ ಆರಂಭಿಸಿದ್ದು ಮಹತ್ವದ ಹೆಜ್ಜೆಯಿಟ್ಟಿದೆ.
ಐಪಿಎಸ್ ಪ್ರಣಬ್ ಮೊಹಂತಿ ನೇತೃತ್ವದ ಎಸ್ಐಟಿ ತಂಡ ಧರ್ಮಸ್ಥಳಕ್ಕೆ ಬಂದು ತನಿಖೆ ಆರಂಭಿಸಿದೆ. ಹಲವಾರು ಕೊಲೆ ಪ್ರಕರಣಗಳು ನಡೆದಿವೆ ಎಂಬ ಆರೋಪದ ಹಿನ್ನಲೆಯಲ್ಲಿ ಎಸ್ಐಟಿ ತಂಡ ಹಳೆಯ ಕಡತಗಳನ್ನು ಪರಿಶಿಲಿಸಿ ತನಿಖೆ ನಡೆಸುತ್ತಿದೆ.
ಹಲವು ವರ್ಷಗಳ ಪ್ರಕರಣಗಳನ್ನು ಪರಿಶೀಲಿಸುವುದು ಮತ್ತು ತನಿಖೆ ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಈ ಕಾರಣಕ್ಕೆ ಎಸ್ಐಟಿ ತಂಡ ಬೆಳ್ತಂಗಡಿಯಲ್ಲಿ ಪ್ರತ್ಯೇಕ ಕಚೇರಿಯನ್ನೇ ತೆರೆದಿದೆ. ಬೆಳ್ತಂಗಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವಿಚಾರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತ್ಯೇಕ ಕಚೇರಿ ತೆರೆದಿದೆ.
ಶವಗಳನ್ನು ಹೂತಿಟ್ಟ ಪ್ರಕರಣದ ಜೊತೆಗೆ ಸಾರ್ವಜನಿಕರಿಗೂ ಇದಕ್ಕೆ ಸಂಬಂಧಿಸಿದಂತೆ ದೂರುಗಳನ್ನು ನೀಡಲು ಅನುಕೂಲವಾಗುವಂತೆ ಕಚೇರಿ ಆರಂಭಿಸಲಾಗಿದೆ. ಈ ಮೂಲಕ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬಹುದು.