ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಅವರಿಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.
10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಪ್ರಜ್ವಲ್ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.