4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್: ಏನಿದು ಪ್ರಜ್ವಲ್ ರೇವಣ್ಣ ಕತೆ

Krishnaveni K

ಬುಧವಾರ, 3 ಜುಲೈ 2024 (11:02 IST)
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿದೆ. ನಾಲ್ಕು ತಿಂಗಳಿಗೊಮ್ಮೆ ಪ್ರಜ್ವಲ್ ಎಚ್ಐವಿ ಟೆಸ್ಟ್ ಗೊಳಗಾಗುತ್ತಿದ್ದರಂತೆ!

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಸ್ ಐಟಿ ತಂಡ ತನಿಖೆ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್ಐವಿ ಟೆಸ್ಟ್ ವಿಚಾರವೂ ಒಂದು.

ಈ ವಿಚಾರ ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ವಿಚಾರಕ್ಕೆ ಪುಷ್ಠಿ ನೀಡಿದೆ. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಪ್ರಜ್ವಲ್ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಗೊಳಗಾಗುತ್ತಿದ್ದರಂತೆ.

ಪ್ರಜ್ವಲ್ ಹಿನ್ನಲೆ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ. ಹಲವು ಮಹಿಳೆಯರೊಂದಿಗೆ ದೈಹಿಕ ಸಂಪರ್ಕವಿಟ್ಟುಕೊಂಡಿದ್ದರಿಂದ ಆತಂಕಗೊಂಡು ಎಚ್ಐವಿ ಪರೀಕ್ಷೆ ನಡೆಸಿರಬಹುದು ಎಂದು ವಿಶ್ಲೇಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ