ಒಂದೇ ದಿನ ಆರು ಕೊರೊನಾ ಕೇಸ್ ; ಜನರಲ್ಲಿ ಆತಂಕ
ಒಂದೇ ದಿನ ಜಿಲ್ಲೆಯಲ್ಲಿ ಆರು ಕೊರೊನಾ ಪಾಸಿಟಿವ್ ಕೇಸ್ ಗಳು ದೃಢಪಟ್ಟಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಸೋಂಕು ದೃಢಪಟ್ಡಿರುವ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದ ಎಲ್ಲ ಜನರ ಗಂಟಲು ದ್ರವದ ಮಾದರಿ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಒಟ್ಟಾರೆ ಎಂಟು ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 81 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.