ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ; ಜೀತದಾಳಾಗಿದ್ದ 52ಮಂದಿಯನ್ನು ಬಂಧನಮುಕ್ತಗೊಳಿಸಿದ ಪೊಲೀಸರು

ಮಂಗಳವಾರ, 18 ಡಿಸೆಂಬರ್ 2018 (09:10 IST)
ಹಾಸನ : ಹಿಂದಿನ ಕಾಲದ ಜೀತ ಪದ್ಧತಿ ಇಂದಿಗೂ ಜೀವಂತ ಇದೆ ಎಂಬುದಕ್ಕೆ ಹಾಸನ ತಾಲೂಕಿನ ಸಾವಂಕನಹಳ್ಳಿಯ ಹೊರವಲಯದಲ್ಲಿ ನಡೆದ ಘಟನೆಯೇ ಪ್ರಮುಖ ಸಾಕ್ಷಿ.


ಹೌದು. ಹಾಸನ ತಾಲೂಕಿನ ಸಾವಂಕನಹಳ್ಳಿಯ ಹೊರವಲಯದಲ್ಲಿರುವ ತೆಂಗಿನ ತೋಟದಲ್ಲಿ 52ಮಂದಿ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಜೀತಕ್ಕಾಗಿ ಇಟ್ಟುಕೊಂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.


ರಾಜ್ಯದ ವಿವಿಧ ಭಾಗದಲ್ಲಿ ಬಿಕ್ಷೆ ಬೇಡುವವರನ್ನು, ಬೀದಿ ಬದಿಯ ವಾಸಿಗಳನ್ನು, ರಾಜ್ಯದ ಮತ್ತು ಬೇರೆ ರಾಜ್ಯಗಳಿಂದ ಬಂದ ಬಡ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಕೊಡುವುದಾಗಿ ನಂಬಿಸಿ ಈ ತೋಟಕ್ಕೆ ಕರೆದುಕೊಂಡು ಬಂದು ಕೂಡಿ ಹಾಕುತ್ತಿದ್ದರು. ಅಲ್ಲದೇ ಅವರನ್ನು ಬೇರೆ ತೋಟಗಳಿಗೆ ಕೂಲಿಗೆ ಕರೆದುಕೊಂಡು ಹೋಗಿ ಮತ್ತೆ ಈ ತೋಟಕ್ಕೆ ವಾಪಸ್ ಕರೆದುಕೊಂಡು ಬಂದು ಒಂದು ಕಡೆ ಕೂಡಿಹಾಕಲಾಗುತಿತ್ತು.


ಈ ಕೃತ್ಯದ ಪ್ರಮುಖ ಆರೋಪಿ ಮುನೇಶ್ ಮತ್ತು ಆತನ ಸಹಚರರು ಹಲವು ವರ್ಷಗಳಿಂದ ಈ ದಂಧೆ ನಡೆಸುಯುತ್ತಿದ್ದು, ಇದೀಗ ಅವರ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದಾರೆ. ಇದೀಗ ಹಾಸನ ಪೊಲೀಸರು ಈತನ ಪಾಪಿಕೃತ್ಯವನ್ನು ಭೇದಿಸಿ ನಾಲ್ವರು ಪುಟ್ಟ ಮಕ್ಕಳು, 17 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 52 ಮಂದಿಯನ್ನು ಅಮಾಯಕರನ್ನು ಜೀತದಿಂದ ಬಂಧಮುಕ್ತಗೊಳಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ