ಕೊಡಗು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗು ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.