ನಾಲ್ಕು ತಿಂಗಳ ಬಳಿಕ ಆಸ್ಪತ್ರೆಯಿಂದ ಎಸ್‌ಎಂ ಕೃಷ್ಣ ಡಿಸ್ಚಾರ್ಜ್, ಹೆಲ್ತ್‌ ಡಿಟೇಲ್ಸ್‌ ಹೀಗಿದೆ

Sampriya

ಬುಧವಾರ, 28 ಆಗಸ್ಟ್ 2024 (19:13 IST)
Photo Courtesy X
ಬೆಂಗಳೂರು:  ಏಪ್ರಿಲ್‌ನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ವಯೋಸಹಜ ಕಾಯಿಲೆಯಿಂದ ದಾಖಲಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌. ಎಂ. ಕೃಷ್ಣ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ವೈದ್ಯರು ಅವರಿಗೆ ಪೂರ್ಣ ಪ್ರಮಾಣದ ವಿಶ್ರಾಂತಿಗೆ ಸಲಹೆ ಮಾಡಿದ್ದಾರೆ. ಬುಧವಾರ ಸಂಜೆ ಮಣಿಪಾಲ್ ಆಸ್ಪತ್ರೆಯಿಂದ ಎಸ್. ಎಂ. ಕೃಷ್ಣ (92)ಅವರು ಡಿಸ್ಚಾರ್ಜ್ ಆಗಿದ್ದಾರೆ.

ಶ್ವಾಸಕೋಶ ಸೋಂಕಿನ ಕಾರಣಕ್ಕೆ ಎಸ್. ಎಂ. ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರ ಆರೋಗ್ಯ ಸುಧಾರಿಸಿದ್ದರಿಂದ ಇಂದು ವೈದ್ಯರು ಡಿಸ್ಚಾರ್ಜ್ ಮಾಡುವಂತೆ ಸೂಚಿಸಿದ್ದಾರೆ. ಇನ್ನೂ ಆರೋಗ್ಯದ ದೃಷ್ಟಿಯಿಂದ ಎರಡು ವಾರಗಳ ಕಾಲ ಯಾರೂ ಎಸ್‌ ಎಂ ಕೃಷ್ಣ ಭೇಟಿಗೆ ಬರಬಾರದು ಎಂದು  ಎಂಎಲ್‌ಸಿ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಬಳಿಕ ಮಣಿಪಾಲ್ ಆಸ್ಪತ್ರೆಗೆ ಏಪ್ರಿಲ್ 29ರಂದು ದಾಖಲಿಸಲಾಯಿತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ