ಸ್ಮೃತಿ ಇರಾನಿ ಕಾರು ಹಿಂಬಾಲಿಸಿದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ಭಾನುವಾರ, 2 ಏಪ್ರಿಲ್ 2017 (11:55 IST)
ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರನ್ನು ಹಿಂಬಾಲಿಸಿದ್ದಲ್ಲದೇ ಅಸಭ್ಯವಾಗಿ ವರ್ತಿಸಿದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ದೆಹಲಿಯ ಚಾಣಕ್ಯಪುರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 
 
ತಮ್ಮ ಕಾರನ್ನು ನಾಲ್ವರು ವಿದ್ಯಾರ್ಥಿಗಳು ಹಿಂಬಾಲಿಸಿದ್ದಲ್ಲದೇ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂದು ಸಚಿವೆ ಇರಾನಿ ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 
ಸಚಿವೆಯ ದೂರಿನ ಮೇರೆಗೆ ದೆಹಲಿಯ ರಾಮ್‌ಲಾಲ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು ರಾತ್ರಿಯಿಂಡಿ ವಿಚಾರಣೆ ನಡೆಸಿದ್ದಾರೆ. ಮದ್ಯ ಸೇವಿಸಿದ್ದರಿಂದ ಅತಿರೇಕದ ವರ್ತನೆ ತೋರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸಚಿವೆಯ ಕಾರನ್ನು ಹಿಂಬಾಲಿಸುತ್ತಿರುವ ಸಂದರ್ಭದಲ್ಲಿ ಯುವಕರು ಮದ್ಯ ಸೇವಿಸಿರುವುದು ಪರೀಕ್ಷೆಯಿಂದ ಖಚಿತವಾಗಿದೆ. ನಾಲ್ವರು ವಿದ್ಯಾರ್ಥಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ   
 
ನಾಲ್ವರು ಯುವಕರಾದ ಆನಂದ್ ಶರ್ಮಾ, ಅವಿನಾಶ್, ಶಿತಾಂಶು ಹಾಗೂ ಕುನಾಲ್ 20 ರಿಂದ 25ರ ವಯಸ್ಸಿನವರಾಗಿದ್ದು, ಎಲ್ಲರೂ ಮದ್ಯಪಾನ ಮಾಡಿದ್ದರು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ