ಬ್ಯಾಂಕಾಕ್‌ನಿಂದ 10 ಅನಕೊಂಡ ಕಳ್ಳಸಾಗಣೆ: ಬೆಂಗಳೂರು ಏರ್‌ಫೋರ್ಟ್‌ನಲ್ಲಿ ವ್ಯಕ್ತಿ ಅರೆಸ್ಟ್

Sampriya

ಮಂಗಳವಾರ, 23 ಏಪ್ರಿಲ್ 2024 (17:15 IST)
Photo Courtesy X
ಬೆಂಗಳೂರು: ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಲಗೇಜ್‌ ಬ್ಯಾಗ್‌ನಲ್ಲಿ 10 ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡೆದಿದೆ.

10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆಗೆ ಪ್ರಯತ್ನಿಸಿದ ವ್ಯಕ್ತಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಕಸ್ಟಮ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ಪ್ರಕಟಣೆಯ ಪ್ರಕಾರ, ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ.

  ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಬರೆದುಕೊಂಡಿದ್ದಾರೆ.

.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ