ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರಿಗೆ ಸೈಟು ಮಾಡಿಸಿಕೊಳ್ಳಲು ಅಪ್ಪ, ಮಗ ಸೇರಿಕೊಂಡು ಸಾಕಷ್ಟು ಆಟ ಆಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.
ಮುಡಾದಿಂದ ಅಕ್ರಮವಾಗಿ ಸೈಟು ಪಡೆಯಲು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಅಧಿಕಾರ ದುರುಪಯೋಗಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ತಮಗೆ ಬೇಕಾದ ಕಡೆ ಬೇಕಾದ ಸೈಟು ಪಡೆದುಕೊಂಡಿದ್ದಾರೆ. ಇದಕ್ಕೆ ಮುಡಾ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ತಮಗೆ ಸಾಧ್ಯವಾಗುವ ಎಲ್ಲಾ ಪ್ರಭಾವ ಬೀರಿದ್ದಾರೆ. ಸೈಟು ಪಡೆದುಕೊಳ್ಳಲು ಅಧಿಕಾರಿಗಳು ನಿಯಮ ಮೀರಿ ಸಾಥ್ ಕೊಟ್ಟಿದ್ದಾರೆ ಎಂಬುದು ಸ್ನೇಹಮಯಿ ಆರೋಪವಾಗಿದೆ. ಸಿದ್ದರಾಮಯ್ಯ ಪ್ರಭಾವದಿಂದಾಗಿ ಪತ್ನಿ ಹೆಸರಿನಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತದಿಂದ ತನಿಖೆ ನಡೆಸಿ ಏನು ಪ್ರಯೋಜನವಿಲ್ಲ. ಸಿಬಿಐನಿಂದಲೇ ವಿಚಾರಣೆ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಠ ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂಬ ಕಾರಣಕ್ಕೇ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಗೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.