ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

Krishnaveni K

ಮಂಗಳವಾರ, 17 ಡಿಸೆಂಬರ್ 2024 (11:15 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
 

ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಮುಡಾದಿಂದ ಅಕ್ರಮವಾಗಿ ಸೈಟು ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ ಸುದ್ದಿಯಾಗಿದ್ದರು. ಅಲ್ಲದೆ ಮುಡಾದಲ್ಲಿ ಸಾವಿರಾರು ಕೋಟಿ ರೂ. ಅಕ್ರಮ ನಡೆದಿದೆ ಎಂದೂ ಅವರು ಆರೋಪಿಸಿದ್ದರು. ಈ ಸಂಬಂಧ ಈಗಾಗಲೇ ಸಿಎಂ ವಿರುದ್ಧ ಒಂದು ಸುತ್ತಿನ ತನಿಖೆಯೂ ನಡೆದಿದೆ. ಮುಡಾ ಅಕ್ರಮ ವಿಚಾರವಾಗಿ ಇಡಿ ತನಿಖೆ ನಡೆಸುತ್ತಿದೆ.

ಇದರ ಬೆನ್ನಲ್ಲೇ ಮೊನ್ನೆಯಷ್ಟೇ ನಾಡದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹೊರಬಿಟ್ಟಿದ್ದರು.

ಆದರೆ ಸ್ನೇಹಮಯಿ ಕೃಷ್ಣ ವಿರುದ್ಧವೇ ರೂಪ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಈಗ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅವರು ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿದೆ. ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ