ಮತ್ತೆ ಧರಣಿ ಕೂರಲಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ

ಬುಧವಾರ, 15 ಜುಲೈ 2015 (16:18 IST)
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಮತ್ತೆ ಧರಣಿ ಕೂರಲು ನಿರ್ಧರಿಸಿದ್ದು, ಪ್ರಮುಖವಾಗಿ ಎರಡು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದ್ದಾರೆ.
 
ಮೂಲಗಳ ಪ್ರಕಾರ, ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಧರಣಿ ಕೂರಲು ಹಜಾರೆ ನಿರ್ಧರಿಸಲಾಗಿದ್ದು, ಪ್ರಮುಖವಾಗಿ ಏಕ ರೂಪದ ಪಿಂಚಿಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಹಾಗೂ ಈಗಾಗಲೇ ಕಲೆದ ಜನವರಿ 12ರಂದು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೊಳಿಸಲಾಗಿರುವ, ರೈತರಿಗೆ ಮಾರಕವಾಗಿರುವ ಭೂ ಸ್ವಾಧೀನ ತಿದ್ದುಪಡಿ ಕಾಯಿದೆಯನ್ನು ಹಿಂಪಡೆಯುವಂತೆ ವಿರೋಧಿಸಿ ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅಕ್ಟೋಬರ್ 2ರಿಂದ ಅನಿರ್ಧಿಷ್ಟಾವಧಿವರೆಗೆ ಧರಣಿ ಕೂರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. 
 
ಇದೇ ವೇಳೆ, ಸೈನಿಕರ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೂಡ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎನ್ನಲಾಗಿದೆ. 
 
ಇನ್ನು ಇದೇ ದೆಹಲಿ ನಗರದ ಜಂತರ್ ಮಂತರ್‌ನಲ್ಲಿ ಕಳೆದ ಕೆಲ ತಿಂಗಳುಗಳ ಹಿಂದೆ ಅಣ್ಣಾ ಹಜಾರೆ ಅವರು ಲೋಕ್‌ಪಾಲ್ ಮಸೂದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಧರಣಿ ಕುಳಿತಿದ್ದರು.

ವೆಬ್ದುನಿಯಾವನ್ನು ಓದಿ