ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Sampriya

ಭಾನುವಾರ, 24 ಆಗಸ್ಟ್ 2025 (10:39 IST)
Photo Credit X
ತುಮಕೂರು: ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಚುನಾವಣಾ ರಾಜಕಾರಣದ ನಿವೃತ್ತಿ ಹೇಳುವುದಾಗಿ ತಿಳಿಸಿದ್ದಾರೆ. ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದಾರೆ.

 ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ಮತ್ತೆ ಚುನಾವಣೆಗೆ ನಿಂತುಕೂ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳುವ ಮೂಲಕ ಮತ್ತೆ ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದೀನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೇನೆ ಎಂದರು.

ಇನ್ನೊಂದು ಐವತ್ತು ವರ್ಷಕ್ಕೆ ತೊಂದರೆ ಆಗಬಾರದು. ನಾನು ಇನ್ನು ಐವತ್ತು ವರ್ಷ ಇರ್ತೀನೇನಪ್ಪಾ ಎಂದು ಸುದ್ದಿಗೋಷ್ಠಿ ಮಧ್ಯೆಯೇ ತಮಾಷೆ ಮಾಡಿದರು. ಇಂತಹ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮ ರಾಜಕೀಯ ಜೀವನದಲ್ಲಿ ಹೆಜ್ಜೆ ಗುರುತು ಎಂದು ತಿಳಿಸಿದರು.

ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮೀಜಿಗಳವರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು, ರಾಜ್ಯದ ಗೃಹ ಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ