ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ

ಸೋಮವಾರ, 20 ಫೆಬ್ರವರಿ 2023 (17:35 IST)
ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಸಾಧನೆ ಬಗ್ಗೆ ಮಾತನಾಡಿದರೆ ಕೆಲವರಿಗೆ ನೋವಾಗುತ್ತದೆ. ಆದರೆ, ಟಿಪ್ಪು ಸುಲ್ತಾನ್​​ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ. ದೌರ್ಜನ್ಯ ನಡೆಸಿ ಲಕ್ಷಾಂತರ ಜನರನ್ನು ಮತಾಂತರ ಮಾಡಿದ. ಆದರೆ ಕೆಲವರು ಆತನಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಕೆಲವರು ನಾ ಹಿಂದೂ ಅಂತ ಹೇಳಿಕೊಳ್ಳುತ್ತಾರೆ. ಆದರೆ, ಹಿಂದುತ್ವವನ್ನು ಒಪ್ಪುವುದಿಲ್ಲವಂತೆ. ಇಂದು ಅಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಕೆಲವು ಬುದ್ಧಿಜೀವಿಗಳು ಶಿವಾಜಿ ಸಾಧನೆ ಬಗ್ಗೆ ಸ್ವಲ್ಪವೇ ಬರೆಯುತ್ತಾರೆ. ಆದರೆ ಅಕ್ಬರ್​ ಬಗ್ಗೆ ಎಷ್ಟು ಬೇಕಾದರೂ ಬರೆಯುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಎಲ್​ಪಿಜಿ ಸಿಲಿಂಡರ್ ದರ 10 ಸಾವಿರ ರೂಪಾಯಿ ಆಗಿದೆ. ನಮ್ಮಲ್ಲಿ 100 ರೂ. ಹೆಚ್ಚಾದರೆ ಪ್ರಧಾನಿ ಮೋದಿ ಕಾರಣ ಅಂತ ದೂರುತ್ತಾರೆ. ಪೆಟ್ರೋಲ್, ಡೀಸೆಲ್ ದರ ಸ್ವಲ್ಪ ಹೆಚ್ಚಾದ್ರೂ ಧಿಕ್ಕಾರ ಕೂಗುತ್ತಾರೆ. ಧಿಕ್ಕಾರ ಹಾಕುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ