ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ನಿಮ್ಮನ್ನು ನೇಮಕ ಮಾಡಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗಂತೂ ಇಲ್ಲಿಯವರೆಗೆ ಸಭಾಪತಿ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಮಾಹಿತಿ ಬಂದ ನಂತರ ವಹಿಸಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಚಿಂತನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಹಲವು ದಶಕಗಳಿಂದ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮಂತ್ರಿ ಸ್ಥಾನ ಪಡೆಯುವುದಕ್ಕೆ ಅರ್ಹನಾಗಿದ್ದರಿಂದ ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾಗ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ಎಲ್ಲಾ ಉಲ್ಟಾ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೆಲವು ಬಾರಿ ಹಿರಿಯರಾಗಿದ್ದೂ ಅರ್ಹರಾಗಿದ್ದರೂ ಅವರನ್ನು ಅನಾರೋಗ್ಯ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣದಿಂದಲೋ ಅವರನ್ನು ಕೈಬಿಡಲಾಗುತ್ತದೆ. ಆದರೆ, ಕೆಲವು ಬಾರಿ ರಾಜಕೀಯ ಜೀವನದಲ್ಲಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರೂ ಮಂತ್ರಿ ಸ್ಥಾನ ದೊರೆಯುವುದಿಲ್ಲ ಎಂದು ಶಾಸಕ ಕೆ.ಬಿ.ಕೋಳಿವಾಡ್ ಹೇಳಿದ್ದಾರೆ.