ಮಗ ಪ್ರಜ್ವಲ್‌ ಲಾಕ್‌ ಆಗಿ ಆಯ್ತು, ಈಗ ಅಮ್ಮ ಭವಾನಿಗೂ ಕಾದಿದೆ ಆಪತ್ತು

sampriya

ಶುಕ್ರವಾರ, 31 ಮೇ 2024 (14:39 IST)
Photo By X
ಹಾಸನ: ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನ ಬೆನ್ನಲ್ಲೇ ಇದೀಗ ತಾಯಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿಗೆ.

ಕೆ.ಆರ್‌. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ ಭವಾನಿ ರೇವಣ್ಣಗೆ ನೋಟಿಸ್‌ ನೀಡಿದೆ.

ನೋಡಿಸ್‌ನಲ್ಲಿ ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ’ ಎಂದು ಉಲ್ಲೇಖಿಸಲಾಗಿದೆ.

‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳೆಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಇನ್ನೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ಬಂಧನದ ಭೀತಿ ಎದುರಾಗಿರುವ ಕಾರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್‌ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಬಂಧನ ಭೀತಿ ಎದುರಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ