ಸೋನಿಯಾ ನೇತೃತ್ವದಲ್ಲಿ ಪಿಸಿಸಿ ಅಧ್ಯಕ್ಷರ ಸಭೆ: ನೆಹರು ಜನ್ಮದಿನ ಆಚರಣೆ ಬಗ್ಗೆ ಚರ್ಚೆ

ಬುಧವಾರ, 7 ಅಕ್ಟೋಬರ್ 2015 (13:45 IST)
ನಗರದ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಇಂದು ಎಲ್ಲಾ ರಾಜ್ಯಗಳ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ನೆಹರುಪ ಅವರ 125ನೇ ಹುಟ್ಟು ಹಬ್ಬವನ್ನು ಆಚರಿಸುವ ಸಲುವಾಗಿ ಚರ್ಚೆ ನಡೆಸಲಾಗುತ್ತಿದೆ.
 
ಸಭೆಯು ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದು, ಎಲ್ಲಾ ರಾಜ್ಯಗಳ ಪಿಸಿಸ ಅಧ್ಯಕ್ಷರೂ ಭಾಗಿಯಾಗಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯದ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೂ ಭಾಗಿಯಾಗಿದ್ದಾರೆ. 
 
ಇನ್ನು ನವಂಬರ್ 14ರಂದು ನೆಹರು ಅವರ 125ನೇ ಜನ್ಮದಿನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ರಾಷ್ಟ್ರಾದ್ಯಂತ ಆಚರಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ