ಬೆಂಗಳೂರು : ಆರ್ಎಸ್ಎಸ್ ಹಿನ್ನೆಲೆಯಿರುವ ವ್ಯಕ್ತಿಯ ಪರ ಸೋನಿಯಾ ಗಾಂಧಿ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದರು.
ಇತ್ತೀಚೆಗಷ್ಟೇ ಬಿಜೆಪಿ ಜೊತೆಗಿನ ಸಂಬಂಧವನ್ನು ಮುರಿದುಕೊಂಡು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ್ದ ಸೋನಿಯಾ ಗಾಂಧಿ ವಿರುದ್ಧ ಓವೈಸಿ ಕಿಡಿಕಾರಿದರು.
ಸೋನಿಯಾ ಗಾಂಧಿಯವರು ಆರ್ಎಸ್ಎಸ್ ಪರ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಜಗದೀಶ್ ಶೆಟ್ಟರ್ ಆರ್ಎಸ್ಎಸ್ನವರು. ಈ ರೀತಿ ಪ್ರಚಾರದಿಂದಾಗಿ ಕಾಂಗ್ರೆಸ್ ಸೈದ್ಧಾಂತಿಕವಾಗಿ ಸೋತಿದೆ. ಇದು ಜಾತ್ಯತೀತತೆಗಾಗಿ ನಿಮ್ಮ ಹೋರಾಟವೇ? ನೀವು ಮೋದಿ ವಿರುದ್ಧ ಹೀಗೆಯೇ ಹೋರಾಡುತ್ತೀರಾ ಎಂದು ಪ್ರಶ್ನಿಸಿದರು.