ಶೀಘ್ರದಲ್ಲಿ ಕೆಪಿಸಿಸಿಗೆ ಹೊಸ ಹುದ್ದೆಗಳ ಘೋಷಣೆ: ಕಾಂಗ್ರೆಸ್ ಹೈಕಮಾಂಡ್

ಸೋಮವಾರ, 29 ಮೇ 2017 (20:13 IST)
ಶೀಘ್ರಧಲ್ಲಿ ಕೆಪಿಸಿಸಿಗೆ ಹೊಸ ಹುದ್ದೆಗಳನ್ನು ಘೋಷಣೆ ಮಾಡಲು ಎಐಸಿಸಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವುದರೊಂದಿಗೆ ಉಪಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ.
 
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಕುರಿತಂತೆ ಇಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸರಣಿ ಸಭೆಗಳು ನಡೆದು ನಾಳೆ ನೂತನ ಅಧ್ಯಕ್ಷರನ್ನು ಘೋಷಿಸಲು ತೀರ್ಮಾನಿಸಿದೆ ಎನ್ನಲಾಗಿದೆ.
 
ಬಹುತೇಕ ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಆರ್‌.ಎಸ್.ಪಾಟೀಲ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರ ಗಣ್ಯರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌‌ನಲ್ಲಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ