ಶ್ರೀರಾಮುಲು ಉಪಮುಖ್ಯಮಂತ್ರಿಯಾಗಲಿದ್ದಾರೆ: ಮಾಜಿ ಶಾಸಕ ಸೋಮಶೇಖರ್ ರೆಡ್ಡಿ

ಭಾನುವಾರ, 25 ಡಿಸೆಂಬರ್ 2016 (16:14 IST)
ಸಂಸದ ಶ್ರೀರಾಮುಲು ಅವರು 2018ಕ್ಕೆ ಅಧಿಕಾರಕ್ಕೆ ಬರಲಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಲ್ಲಿ ಆರೋಗ್ಯ ಖಾತೆಯ ಜೊತೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಬಳ್ಳಾರಿ ಜಿಲ್ಲೆಯ ಶ್ರೀರಾಂಪುರ ಕಾಲೋನಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರು 108 ಯೋಜನೆ ಜಾರಿಗೆ ತರುವ ಮೂಲಕ ಬಡವರ ಚಿಕಿತ್ಸೆಗೆ ನೆರವಾಗಿದ್ದರು. ಜೊತೆಗೆ ಮನೆ ಮನೆಗೆ ತೆರಳಿ ಚಿಕಿತ್ಸೆ ನೀಡಬಲ್ಲಂತಹ ಮೊಬೈಲ್ ಆಸ್ಪತ್ರೆ ಯೋಜನೆ ಜಾರಿಗೆ ತರುವ ಚಿಂತನೆ ನಡೆಸಿದ್ದರು. ಆದರೆ, ಆ ಯೋಚನೆ ಈಡೇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 
 
ಆದರೆ, ಮುಂಬರುವ ವಿಧಾನಸಭೆಯಲ್ಲಿ ಬಿಎಸ್‌ವೈ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ.ಅದರಲ್ಲಿ ಶ್ರೀರಾಮುಲು ಅವರು ಮತ್ತೊಮ್ಮೆ ಆರೋಗ್ಯ ಸಚಿವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಮೊಬೈಲ್ ಆಸ್ಪತ್ರೆ ಕನಸು ನನಸು ಮಾಡಲಿದ್ದಾರೆ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ