ತೇಜಸ್ವಿ ಸೂರ್ಯ ಸಭೆಯಲ್ಲಿ ಗದ್ದಲ ಸೃಷ್ಟಿಸಿದ್ದು ಸೌಮ್ಯ ರೆಡ್ಡಿ ಬೆಂಬಲಿಗರು: ಚುನಾವಣಾ ಆಯೋಗಕ್ಕೆ ದೂರು

Sampriya

ಮಂಗಳವಾರ, 16 ಏಪ್ರಿಲ್ 2024 (15:54 IST)
Photo Courtesy X
ಬೆಂಗಳೂರು: ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯಲ್ಲಿ ಗಲಭೆ ಸೃಷ್ಟಿಸಿದ್ದು ಕಾಂಗ್ರೆಸ್ ಬೆಂಬಲಿಗರೆಂದು ಆಯೋಜಕರು ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಹಾಗೂ ಬೆಂಬಲಿಗರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಏಪ್ರಿಲ್  13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಣ ಕಳೆದುಕೊಂಡ ಠೇವಣಿದಾರರ ಪ್ರಶ್ನೆಗೆ ಉತ್ತರಿಸದೆ ಅವರ ಮೇಲೆ ಹಲ್ಲೆ ನಡೆಸಿ, ದರ್ಪ ತೋರಿಸಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಕೆಲ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದೀಗ ಕಾರ್ಯಕ್ರಮದ ಆಯೋಜಕರು ಕಾಂಗ್ರೆಸ್ ಪಕ್ಷದ ಬೆಂಬಲಿಗರೇ ಸಭೆಯಲ್ಲಿ ಠೇವಣಿದಾರರಾಗಿ ಕಾಣಿಸಿಕೊಂಡು ಗದ್ದಲ ಸೃಷ್ಟಿಸಿದ್ದಾರೆಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ, ಲಕ್ಷ್ಮಿ ಮಂಜುಳಾ ಮತ್ತು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

ದೂರಿನಲ್ಲಿ ಹಿಗಿದೆ: ಸಭೆಗೆ ಆಹ್ವಾನ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ವ್ಯಕ್ತಿಗಳು ಬಲವಂತವಾಗಿ ಸಭೆಗೆ ಹಾಜರಾಗಿ, ಗದ್ದಲ ಸೃಷ್ಟಿಸಿದ್ದಾರ. ಲಕ್ಷ್ಮಿ ಮಂಜುಳಾ ನೇತೃತ್ವದ ತಂಡ ಸ್ಥಳದಲ್ಲಿ ಹಿಂಸಾತ್ಮಕ ವರ್ತನೆ ತೋರಿತ್ತು, ಹಿರಿಯ ನಾಗರಿಕರು ಮತ್ತು ಮಹಿಳೆಯರು ಸೇರಿದಂತೆ ಹಾಜರಿದ್ದವರನ್ನು ತಳ್ಳಾಡಿದ್ದರು, ಇದರಿಂದ ಸ್ಥಳದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದು ಪೂರ್ವಯೋಜಿತ ಕೃತ್ಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ