ನೈಋತ್ಯ ಮುಂಗಾರು ಚುರುಕು: ಎರಡು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ

ಭಾನುವಾರ, 26 ಜೂನ್ 2022 (21:08 IST)
ಬೆಂಗಳೂರು: ನೈಋತ್ಯ ಮುಂಗಾರಿನ ಪರಿಣಾಮ ನಾಳೆಯಿಂದ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
 
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.
 
ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 
 
ರಾಜಧಾನಿಯಲ್ಲಿ ಭಾರೀ ಮಳೆ:
 
ಬೆಂಗಳೂರು, ಬೆಂ ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ