ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ ಕೈ ಪಡೆ

ಗುರುವಾರ, 12 ಸೆಪ್ಟಂಬರ್ 2019 (19:26 IST)
ನೆರೆ ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದ್ದು ಅಪಾರ ಆಸ್ತಿ ಹಾನಿಯಾಗಿದ್ದರೂ ಕೇಂದ್ರ ಸರಕಾರ ಪರಿಹಾರ ಘೋಷಣೆ ಮಾಡುತ್ತಿಲ್ಲ ಅಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಕೇಂದ್ರದ ನಿರ್ಲಕ್ಷ್ಯ ಮನೋಧೋರಣೆ ಖಂಡಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ  ರ್ಯಾಲಿ ಮಾಡಲಾಯಿತು.

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಇರೋ ಕಾಂಗ್ರೆಸ್ ಕಚೇರಿ ಎದುರಿನ‌ ರಸ್ತೆ ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.

ನೆರೆ ಹಾವಳಿಯಿಂದ ಉತ್ತರ ಕರ್ನಾಟಕದಲ್ಲಿ ಅಪಾರ ಆಸ್ತಿ ಹಾಳಾಗಿದೆ. ಜನರ ಬದುಕು ಬೀದಿಗೆ ಬಂದಿದೆ. ಆದರೂ ಕೇಂದ್ರದಲ್ಲಿರುವ ಬಿಜೆಪಿ ಪರಿಹಾರ ಘೋಷಣೆ ಮಾಡಿಲ್ಲ. ರಾಜ್ಯದ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ‌ ಮೋದಿ, ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ