ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ

Sampriya

ಬುಧವಾರ, 25 ಸೆಪ್ಟಂಬರ್ 2024 (14:06 IST)
ಬೆಂಗಳೂರು: ಮುಡಾ ನಿವೇಶನ ಹಂಚಿಕ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ.

ಮೂರು ತಿಂಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ನ್ಯಾಯಾಲಯ ಆದೇಶಿಸಿದೆ.

ಮುಡಾದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ  ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್​ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್​ ಜನಪ್ರತಿನಿಧಿಗಳ ಕೋರ್ಟ್​ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿತ್ತು.


ಮಂಗಳವಾರ ಹೈಕೋರ್ಟ್‌ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್‌ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ  ಮೈಸೂರು ಲೋಕಾಯುಕ್ತಕ್ಕೆ  ಆದೇಶಿಸಿದೆ.

ಮುಂದಿನ ತನಿಖೆಯನ್ನು ಡಿಸೆಂಬರ್ 24ಕ್ಕೆ ಮುಂದೂಡಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್  ಆದೇಶ  ಹೊರಡಿಸಿದ್ದಾರೆ,

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ