ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಅಸೂಚಿತ ದೇವಾಲಯ, ಸಂಸ್ಥೆಗಳಲ್ಲಿ ಗೋವುಗಳನ್ನು ಪೂಜಿಸಲಾಗುವುದು. ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಆರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಲಾಗುವುದು.
ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ತಿನ್ನಿಸಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ಗೋಪೂಜೆ ಕಾರ್ಯಕ್ರಮವನ್ನು ಬಲಿಪಾಡ್ಯಮಿ ದಿನದಂದು ಸಂಜೆ 5.30 ರಿಂದ 6.30 ರವರೆಗೆ ಗೋಧೋಳಿ ಲಗ್ನದಲ್ಲಿ ನಡೆಸಲಾಗುವುದು.