ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ: ಸಚಿವ ಜಿ.ಪರಮೇಶ್ವರ್

ಗುರುವಾರ, 15 ಸೆಪ್ಟಂಬರ್ 2016 (18:12 IST)
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ತಮಿಳುನಾಡು ಬಂದ್ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡುವಂತೆ ಡಿಜಿಪಿ ಓಂ ಪ್ರಕಾಶ್, ತಮಿಳುನಾಡು ಡಿಜಿಪಿ ಅವರ ಬಳಿ ಮನವಿ ಮಾಡಿಕೊಂಡಿದ್ದು, ಸಿಎಸ್ ಅವರ ಜೊತೆಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ತಮಿಳುನಾಡು ಬಂದ್ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾವೇರಿ ಕಣಿವೆಯ ಜಿಲ್ಲೆಗಳಾದ ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಾಗೂ ಬೆಂಗಳೂರಿನಲ್ಲಿ 11 ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.
 
ಕನ್ನಡಪರ ಸಂಘಟನೆಗಳಿಂದ ಇಂದು ರೈಲು ತಡೆದು ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 210 ಪ್ರತಿಭಟನಾನಿರತರನ್ನು ಬಂಧಿಸಲಾಗಿದೆ. ಇದನ್ನು ಹೊರತು ಪಡಿಸಿ ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ