ರಾಮಲಿಂಗ ರೆಡ್ಡಿಯನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್
ಮಂಗಳವಾರ, 9 ಜುಲೈ 2019 (09:36 IST)
ಬೆಂಗಳೂರು : ಕೈ ಶಾಸಕ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಶಾಸಕ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರಾಜೀನಾಮೆ ಬೆನ್ನಲ್ಲೇ ಶಾಸಕರ ಭೇಟಿ ರಾಜಕೀಯ ವಲಯದಲ್ಲಿ ಬಾರೀ ಕುತೂಹಲ ಮೂಡಿಸಿದೆ.
ಆದರೆ ರಾಮಲಿಂಗಾ ರೆಡ್ಡಿ ಭೇಟಿ ಬಳಿಕ ಮಾತನಾಡಿದ ಎಸ್.ಆರ್.ವಿಶ್ವನಾಥ್, ರಾಮಲಿಂಗಾ ರೆಡ್ಡಿ ಬಜೆಪಿಗೆ ಬಂದರೆ ನಾನು ಸ್ವಾಗತಿಸುತ್ತೇನೆ. ಆದರೆ ನಾನು ಯಾವದೇ ರಾಜಕೀಯ ವಿಷಯವಾಗಿ ಚರ್ಚೆಗೆ ಬಂದಿಲ್ಲ. ರೆಡ್ಡಿ ಸಮುದಾಯದ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಬಂದಿದ್ದೆ. ರಾಮಲಿಂಗಾ ರೆಡ್ಡಯವರ ನಿವಾಸಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ ಎಂದು ಹೇಳಿದ್ದಾರೆ.