ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅರೆಸ್ಟ್‌

ಭಾನುವಾರ, 6 ನವೆಂಬರ್ 2022 (15:44 IST)
ಅತ್ಯಾಚಾರದ ಆರೋಪದ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದಾರೆ. ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ವರದಿ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ