ಮೈಸೂರಿನ ತಮ್ಮ ನಿವಾಸಕ್ಕೆ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ರಾಜಕಾರಣಿ ಎಂಬ ಗೌರವದಿಂದ ನನ್ನನ್ನು ಭೇಟಿ ಮಾಡಲು ಬಂದಿದ್ದರೆ ಹೊರತು ಯಾವುದೇ ರಾಜಕೀಯ ಚರ್ಚೆಗಳು ಆಗಿಲ್ಲ. ಅವರಿಗೆ ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಬಿಜೆಪಿಗೆ ನಾವು ಹೊಸಬರು, ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪನವರ ಅಪಾರ ಶ್ರಮವಿದೆ. ನಾವು ಬಿಜೆಪಿಗೆ ಬಂದಿದ್ದರಿಂದ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ. ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗಿದೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ 3 ಲಕ್ಷ ಅಂತರದಿಂದ ಗೆಲ್ಲುವ ಸಾಮರ್ಥ್ಯವಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ವಲಸಿಗರ ಪರ ಬ್ಯಾಟ್ ಬೀಸಿದರು.