ಶಾಸಕ ಸ್ಥಾನಕ್ಕೆ ಶ್ರೀನಿವಾಸಮೂರ್ತಿ ರಾಜೀನಾಮೆ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಅಕ್ಕಪಕ್ಕದ ಕ್ಷೇತ್ರದ ನಾಯಕರು ಹೇಳಿದರು ಅಂತಾ ನನಗೆ ಟಿಕೆಟ್ ತಪ್ಪಿಸಿದರು. ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದ್ರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹಾಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.