ಶ್ರೀನಿವಾಸ್ ಪ್ರಸಾದ್‌‌ಗೆ ಕೊಕ್: ಸಂಸದ ಧ್ರುವನಾರಾಯಣ್ ಬೇಸರ

ಸೋಮವಾರ, 20 ಜೂನ್ 2016 (12:18 IST)
ರಾಜ್ಯ ಸಚಿವ ಸಂಪುಟದಿಂದ ಶ್ರೀನಿವಾಸ್ ಪ್ರಸಾದ್‌ ಅವರನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದ ಆರ್.ಧ್ರುವನಾರಾಯಣ್ ಬೇಸರ ವ್ಯಕ್ತಪಡಿಸಿದ್ದಾರೆ.
 
ರಾಜ್ಯ ಸಚಿವ ಸಂಪುಟದಲ್ಲಿ ತಮ್ಮ ಪುತ್ರನಿಗೆ ಸಚಿವ ಸ್ಥಾನ ಕೊಡಿಸುವ ಮೂಲಕ ಕಾಂಗ್ರೆಸ್‌‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ ವ್ಯಾಮೋಹ ಮೆರೆದಿದ್ದಾರೆ ಎಂದು ಆರ್.ಧ್ರುವನಾರಾಯಣ್ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಸಂಸದ ಆರ್.ಧ್ರುವನಾರಾಯಣ್, ಶ್ರೀನಿವಾಸ್ ಪ್ರಸಾದ್ ಚುನಾವಣೆಯಲ್ಲಿ ನಿಲ್ಲಲು ಹಿಂದೇಟು ಹಾಕಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರ ಮನೆಗೆ ಬಂದು ಚುನಾವಣೆಗೆ ನಿಲ್ಲುವಂತೆ ಒತ್ತಡ ಹೇರಿ ಸಚಿವ ಸ್ಥಾನ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದೀಗ, ಶ್ರೀನಿವಾಸ್ ಪ್ರಸಾದ್ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ