ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‌ಗೆ ಇದು ಬೇಕಿತ್ತಾ?: ಸಚಿವ ರಮೇಶ್ ಕಿಡಿ

ಸೋಮವಾರ, 2 ಜನವರಿ 2017 (17:30 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ರಮೇಶ್ ಕುಮಾರ್, ಪ್ರಸಾದ್ ಬಗ್ಗೆ ಅಪಾರ ಗೌರವ ಇದೆ. ಆದರೆ, ಈ ಇಳಿವಯಸ್ಸಿನಲ್ಲಿ ಅವರಿಗೆ ಇದು ಬೇಕಿತ್ತಾ?. ಅವರು ಹೋಗಿದ್ದಾದರು ಎಲ್ಲಿಗೆ ಎಂದು ಖಾರವಾಗಿ ಪ್ರಶ್ನಿಸಿದರು. 
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ಗೆಲ್ಲುವುದಷ್ಟೇ ನಿಮ್ಮ ಗುರಿಯೇ? ಜಾತಿಯತೆ ಸರಿ ಎನ್ನುವ ಸನಾತನ ಧರ್ಮ ಪ್ರತಿಪಾದಿಸುವ ಪಕ್ಷಕ್ಕೆ ಹೋಗಿದ್ದಾರೆ. ಆತ್ಮಗೌರವ ಕಳೆದುಕೊಂಡ ಮೇಲೆ ಪ್ರಪಂಚವೇ ಸಿಕ್ಕರೆ ಏನು ಪ್ರಯೋಜನ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಡೆಯನ್ನು ಟೀಕಿಸಿದರು. 
 
ಜಾತಿ ಧರ್ಮದ ಹೆಸರಿನಲ್ಲಿ ಮತಯಾಚಿಸಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪುನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸ್ವಾಗತಿಸಿದರು. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿ, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ