ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು

ಭಾನುವಾರ, 19 ಜನವರಿ 2020 (10:56 IST)
ಬೆಂಗಳೂರು : ರಾಜ್ಯಾದ್ಯಂತ ಇಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ  ಆರೋಗ್ಯ ಸಚಿವ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದ್ದಾರೆ.



ಬೆಂಗಳೂರಿನ ಚಿಕ್ಕಜಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ  ಹಾಕುವ ಮೂಲಕ ಸಚಿವ ಬಿ.ಶ್ರೀರಾಮುಲು ಅವರು  ಕಾರ್ಯಕ್ರಮಕ್ಕೆ  ಚಾಲನೆ ನೀಡಿದ್ದಾರೆ.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿ. ಈ ಬಾರಿ 100ಕ್ಕೆ 100ರಷ್ಟು ಟಾರ್ಗೆಟ್ ರೀಚ್ ಆಗಬೇಕು.  ಈ ನಿಟ್ಟಿನಲ್ಲಿ ಎಲ್ಲಾ ಪಂಚಾಯ್ತಿ, ಶಾಲೆ, ಮನೆಗಳಿಗೆ ಹೋಗಿ ಲಸಿಕೆ ಹಾಕಿ ಜಾಗೃತಿ ಮೂಡಿಸೋದಕ್ಕೆ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ