ಕೋವಿಡ್ ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಪಿ ಬಳಕೆ ಎಂದ ಶ್ರೀರಾಮುಲು

ಶುಕ್ರವಾರ, 1 ಮೇ 2020 (20:46 IST)
ರಾಜ್ಯದಲ್ಲಿ ಪರೀಕ್ಷಾರ್ಥವಾಗಿ ಕೋವಿಡ್ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಪ್ರಾರಂಭಿಸಲಾಗಿದೆ ಎಂದು ಸಚಿವ ಹೇಳಿದ್ದಾರೆ.


ಪ್ಲಾಸ್ಮಾ ಥೆರಪಿ ಯಶಸ್ಸನ್ನು ಗಮನಿಸಿ ಮುಂದಿನ ದಿನಗಳಲ್ಲಿ ಅದರ ಬಳಕೆಯ ಹೆಚ್ಚಳದ ಬಗ್ಗೆ ನಿರ್ಧರಿಸಲಾಗುವುದು ಎಂದು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ರಾಜ್ಯದಲ್ಲಿ 576 ಕೊರೋನಾ ಸೋಂಕಿತರಿದ್ದು, ಅದರಲ್ಲಿ 235 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ದಿನೇ ದಿನೇ ಕೊರೋನಾ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯು ಏರಿಕೆಯಾಗುತ್ತಿದ್ದು, ತಜ್ಞರ ಸಲಹೆ ಮೇರೆಗೆ ಪ್ಲಾಸ್ಮಾ ಥೆರಪಿಯ ಪ್ರಯೋಗ ನಡೆಯುತ್ತಿದೆ ಎಂದರು.

ಸಧ್ಯ ಪಿ.ಸಿ. ಆರ್ ಯಂತ್ರಗಳನ್ನು ಬಳಸಿಕೊಂಡು ಪರೀಕ್ಷೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸರಳ ರೀತಿಯಲ್ಲಿ ಪರೀಕ್ಷೆ ಮಾಡುವಂತಾಗಬೇಕು ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ