ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ- ಡಾ.ಪರಮೇಶ್ವರ್
ಸೋಮವಾರ, 21 ಜನವರಿ 2019 (11:17 IST)
ತುಮಕೂರು : ಡಾ.ಶಿವಕುಮಾರ್ ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಡಾ.ಪರಮೇಶ್ವರ್ ಅವರು ‘ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ತುಂಬಾ ಕಡಿಮೆಯಾಗಿದೆ. ನಮ್ಮ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ . ಬಿಪಿ ಕೂಡ ಏರುಪೇರಾಗುತ್ತದೆ. ಶ್ರೀಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಹಾಗೇ ಇನ್ನು ಎರಡು ಗಂಟೆಯ ಬಳಿಕ ಶ್ರೀಗಳ ಆರೋಗ್ಯ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ