ಬೆಂಗಳೂರು: ಯಾವಾಗ ಪರೀಕ್ಷಾ ವೇಳಾಪಟ್ಟಿ ಬರುತ್ತೆ ಅಂತಾ ಇದುವರೆಗೆ ವಿದ್ಯಾರ್ಥಿಗಳು ಕೇಳುತ್ತಿದ್ದರು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆ 2025ರ ಅಮತಿಮ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ ಮಾಡಿದೆ.
ಪರೀಕ್ಷಾ ವೇಳಾಪಟ್ಟಿಯನ್ನು kseab.karnataka.gov.in ವೆಬ್‌ಸೈಟ್‌ನಲ್ಲಿ ನೋಡಬಹುದು.
ಇದರ ಪ್ರಕಾರ ಮಾರ್ಚ್ 1 ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಮತ್ತು ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ.