ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ
ಜೂನ್ 25 ರಿಂದ ಜುಲೈ 03 ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಈ ಆದೇಶ ಹೊರಡಿಸಿದ್ದಾರೆ.